LATEST NEWS
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂ ಸ್ವರ್ಶ- 173 ಮಂದಿ ಪ್ರಯಾಣಿಕರು ಸೇಫ್

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂ ಸ್ವರ್ಶ- 173 ಮಂದಿ ಪ್ರಯಾಣಿಕರು ಸೇಫ್
ಮಂಗಳೂರು ಸೆಪ್ಟೆಂಬರ್ 21: ಮಂಗಳೂರಿನಿಂದ ದೋಹಾಕ್ಕೆ ತೆರಳಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ 821 , ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಇಂದು ಸಂಜೆ 5.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ವಿಮಾನದ ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆಯಲ್ಲಿ ವಿಮಾನವನ್ನು ಪುನಃ 6.40 ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು.
173 ಪ್ರಯಾಣಿಕರು ಸೇಫ್
ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ವಿಮಾನದಲ್ಲಿದ್ದ ಎಲ್ಲಾ 173 ಪ್ರಯಾಣಿಕರಿಗೆ ಮಂಗಳೂರಿನಲ್ಲಿ ತಂಗುವ ವ್ಯವಸ್ಥೆ ವಿಮಾನ ಸಂಸ್ಥೆ ಮಾಡಿದ್ದು , ನಾಳೆ ಬೆಳಿಗ್ಗೆ ದೋಹಾಕ್ಕೆ ತೆರಳಲು ವಿಮಾನ ವ್ಯವಸ್ಥೆ ಮಾಡಲಾಗುವುದೆಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
