Connect with us

LATEST NEWS

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ -110ಕ್ಕೂ ಅಧಿಕ ಮಂದಿ ಸಾವಿನ ಶಂಕೆ

ಅಹಮದಾಬಾದ್ ಜೂನ್ 12 : ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನ ಇದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿ ನಗರದಲ್ಲಿ ಪತನಗೊಂಡಿತು 110ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ವಿಮಾನದಲ್ಲಿ 230 ವಯಸ್ಕರು ಹಾಗು 2 ಮಕ್ಕಳನ್ನು ಒಳಗೊಂಡಂತೆ ಒಟ್ಟು 232 ಪ್ರಯಾಣಿಕರು ಇದ್ದರು. ಈ ಪೈಕಿ 169 ಮಂದಿ ಭಾರತೀಯರು ಇದ್ದರು. ಟೇಕಾಫ್ ಆದ ಒಂದೇ ನಿಮಿಷದಲ್ಲಿ ಸಂಪರ್ಕ ಕಡಿದುಕೊಂಡ ವಿಮಾನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಮೇಘಾನಿ ಪ್ರದೇಶದಲ್ಲಿ ಪತನಗೊಂಡಿದೆ. ಹತ್ತಾರು ಅಂಬುಲೆನ್ಸ್‌ಗಳಲ್ಲಿ ಸುಟ್ಟು ಕರಕಲಾದ ದೇಹಗಳನ್ನು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.


ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ವಿಮಾನದಲ್ಲಿ ಅಧಿಕ ಇಂಧನ ಇದ್ದು, ಇದು ದುರಂತವನ್ನು ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗೆ ವಿಮಾನ ಬಡಿದ್ದಿದ್ದು, ಹಾಸ್ಟೆಲ್‌ನಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇದೇ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಮಾನಯಾನ ಸಚಿವ ರಾಮ್‌ಮೋಹನ್ ನಾಯ್ಡು ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಘಟನಾ ಸ್ಥಳಕ್ಕೆ ಆಗಮಿಸಲಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *