LATEST NEWS
ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ
ಮಂಗಳೂರು ಜೂನ್ 11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಾಗಿದ್ದ ಏರ್ ಇಂಡಿಯಾ 680 ವಿಮಾನ ದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು ವಿಮಾನ ತನ್ನ ಹಾರಾಟವನ್ನು ರದ್ದುಪಡಿಸಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬಯಿಗೆ ಹೊರಡಬೇಕಾಗಿದ್ದ ಏರ್ ಇಂಡಿಯಾ 680 ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಮಂಗಳೂರು ವಿಮಾನ ನಿಲ್ದಾಣದಿಂದ 12.40ಕ್ಕೆ ಹೋರಡಬೇಕಾಗಿದ್ದ ವಿಮಾನ ರನ್ ವೇ ನಲ್ಲೆ ಇರುವಾಗ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.

ತಾಂತ್ರಿಕ ಸಮಸ್ಯೆಯಿಂದಾಗಿ ಹಾರಾಡದೆ ನಿಂತಿದೆ. ತಂತ್ರಜ್ಞರಿಂದ ವಿಮಾನ ಪರಿಶೀಲನೆ ಮುಂದುವರಿದಿದ್ದು, ತಂತ್ರಜ್ಞರ ವರದಿ ಬಳಿಕವೇ ಮುಂದಿನ ನಿರ್ಧಾರದ ಕೈಗೊಳ್ಳುವುದಾಗಿ ಅಧಿಕಾರಿಗಳ ಹೇಳಿದ್ದಾರೆ.