Connect with us

LATEST NEWS

ಕೇರಳ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಎರ್ ಇಂಡಿಯಾ ವಿಮಾನ ದುರಂತ

ಕೇರಳ ಅಗಸ್ಟ್ 7: ದುಬೈನಿಂದ ಕೇರಳದ ಕ್ಯಾಲಿಕಟ್ ಗೆ ಆಗಮಿಸಿದ ಎರ್ ಇಂಡಿಯಾ ಎಕ್ಸ್ ಪ್ರಸ್ ವಿಮಾನ ದುರಂತಕ್ಕೀಡಾಗಿದೆ. ಎರ್ ಇಂಡಿಯಾ ವಿಮಾನ IX – 1344 ರನ್‌  ವೇ ನಿಂದ ಜಾರಿ ಈ ದುರಂತ ಸಂಭವಿಸಿದೆ. ಭಾರೀ ಮಳೆಯ ಕಾರಣಕ್ಕೆ ಏರ್ ಇಂಡಿಯಾದ ವಿಮಾನ ಅಪಘಾತಕ್ಕೀಡಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ವಿಮಾನದಲ್ಲಿ 191 ಪ್ರಯಾಣಿಕರಿದ್ದರು ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಸುಮಾರು 191 ಮಂದಿ ಪ್ರಯಾಣಿಕರನ್ನು ಹೊತ್ತು ತಂದ ಎರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ರನ್ ವೆ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಈ ಘಟನೆಯ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಬರಬೇಕಾಗಿದೆ. ಈ ವಿಮಾನದಲ್ಲಿ 174 ಮಂದಿ ಪ್ರಯಾಣಿಕರು 10 ಮಕ್ಕಳು,  ಇಬ್ಬರು ಪೈಲೆಟ್ ಸೇರಿದಂತೆ 5 ಮಂದಿ ವಿಮಾನ ಸಿಬ್ಬಂದಿ ಇದ್ದರು ಎಂದು ಹೇಳಲಾಗಿದೆ.

 

ಇತ್ತೀಚೆಗಿನ ಮಾಹಿತಿ ಪ್ರಕಾರ ಒಬ್ಬ ಪೈಲೆಟ್ ಸೇರಿದಂತೆ ಇಬ್ಬರು ಪ್ರಯಾಣಿಕರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಠವಶಾತ ವಿಮಾನ ದುರಂತಕ್ಕೀಡಾದರೂ ಬೆಂಕಿ ಹತ್ತಿಕೊಳ್ಳದಿರುವುದರಿಂದ ಪ್ರಯಾಣಿಕರು ಬದುಕುಳಿದಿರುವ ಸಾಧ್ಯತೆ ಇದೆ  ಎಂದು ಹೇಳಲಾಗಿದೆ.

 

Facebook Comments

comments