Connect with us

    FILM

    ಡೈವೋರ್ಸ್ ಗಾಸಿಫ್ ಗೆ ಬ್ರೇಕ್ – 17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿಯಲ್ಲಿ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ

    ಮುಂಬೈ ಎಪ್ರಿಲ್ 21: ಕಳೆದ ಕೆಲವು ತಿಂಗಳಿನಿಂದ ಬಾಲಿವುಡ್ ನಲ್ಲಿ ಹರಿದಾಡುತ್ತಿದ್ದ ಐಶ್ವರ್ಯ ರೈ ಮತ್ತು ಅಭಿಷೇಖ್ ಬಚ್ಚನ್ ಅವರ ವಿಚ್ಚೇದನ ಸುದ್ದಿಗೆ ಇದೀಗ ಪುಲ್ ಸ್ಟಾಪ್ ಬಿದ್ದಿಗೆ. ಇಬ್ಬರು ತಾರಾ ದಂಪತಿ ತಮ್ಮ 17ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.


    ಏಪ್ರಿಲ್​ 20ರಂದು ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಟ್​ ಮಾಡಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರ ಜೊತೆ ಮಗಳು ಆರಾಧ್ಯಾ ಕೂಡ ಸಾಥ್​ ನೀಡಿದ್ದಾರೆ. ಒಂದಷ್ಟು ದಿನಗಳ ಹಿಂದೆ ​ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಬಚ್ಚನ್​ ಅವರ ಬಗ್ಗೆ ಗಾಸಿಪ್​ ಹಬ್ಬಿತ್ತು. ಅವರಿಬ್ಬರು ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸಿದ್ದರು.


    ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಳ್ಳುವ ಮೂಲಕ ಎಲ್ಲಾ ಗಾಸಿಫ್ ಗೆ ಬ್ರೇಕ್ ಹಾಕಿದ್ದಾರೆ. ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್​ ಅವರು ಹಲವು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದರು. ಆ ಬಳಿಕ ಅವರ ನಡುವೆ ಸ್ನೇಹ ಬೆಳೆಯಿತು. ನಂತರ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2007ರಲ್ಲಿ ಅವರಿಬ್ಬರು ಹಸೆಮಣೆ ಏರಿದರು. 2011ರಲ್ಲಿ ಐಶ್ವರ್ಯಾ ರೈ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಐಶ್ವರ್ಯಾ ರೈ ಹಾಗೂ ಅಭಿಷೇಕ್​ ಬಚ್ಚನ್​ ಅವರ ಸುಖ ಸಂಸಾರಕ್ಕೆ ಈಗ 17 ವರ್ಷ ತುಂಬಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *