DAKSHINA KANNADA
ಸಂಬಳ ನೀಡುವಂತೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ…

ಪುತ್ತೂರು, ಆಗಸ್ಟ್ 17: ಅಕ್ಷರ ದಾಸೋಹ ನೌಕರರ ಸಂಬಳವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪುತ್ತೂರು ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.
ನೂರಾರು ಸಂಖ್ಯೆಯ ಅಕ್ಷರ ದಾಸೋಹ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದಿಟ್ಟರು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಬಿ.ಎಂ.ಭಟ್ ಕಳೆದ ಮೂರು ತಿಂಗಳಿನಿಂದ ಸರಕಾರ ಅಕ್ಷರ ದಾಸೋಹ ನೌಕರರಿಗೆ ಸಂಬಳವನ್ನು ನೀಡದೆ ಸತಾಯಿಸುತ್ತಿದೆ.

ಬಡ ಕಾರ್ಮಿಕರ ಸಂಬಳವನ್ನು ತಡೆ ಹಿಡಿದು 75 ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯನ್ನು ನಡೆಸುತ್ತಿರುವ ಸರಕಾರಕ್ಕೆ ನಾಚಿಕೆಯಾಗಬೇಕು ಎಂದರು.