LATEST NEWS
ಅಕ್ಷರಸಂತ ಪದ್ಮಶ್ರೀ ಹಾಜಬ್ಬ ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ದಂಡು

ಮಂಗಳೂರು ನವೆಂಬರ್ 09: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭ ಹಾಜಬ್ಬ ಅವರನ್ನು ಸ್ವಾಗತಿಸಲು ಅಭಿಮಾನಿಗಳು ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಯಿತು.
ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪ್ರಧಾನ ಮಾಡಲಾಯಿತು. ಬರಿಗಾಲಿನಲ್ಲೇ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದ್ದರು.

ಬಳಿಕ ಅವರನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಅಧಿಕಾರಿಗಳು ಉಪಸ್ಥಿತರಿದ್ದರು.