LATEST NEWS
ಮಂಗಳೂರು – ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಏರುಪೇರು ಮಹಿಳೆ ಸಾವು
ಮಂಗಳೂರು ಜನವರಿ 11: ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಮೃತರು ಕಡಬ ತಾಲೂಕು ಆಲಂಕಾರು ಗ್ರಾಮದ ದಯಾನಂದ ಗೌಡರ ಪತ್ನಿ ಪುಷ್ಪಾವತಿ (34) ಎಂದು ಗುರುತಿಸಲಾಗಿದೆ. ಅವರು ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತಾಯಿ ಮಗು ಆರೋಗ್ಯವಾಗಿದ್ದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಕೆಲವು ದಿನಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಮೃತರು ಪತಿ ಎರಡು ತಿಂಗಳ ಹೆಣ್ಣು ಮಗು ಸಹಿತ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.