FILM
ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಆಲಿಯಾ ಭಟ್

ಮುಂಬೈ ನವೆಂಬರ್ 6: ಬಾಲಿವುಡ್ ನಟಿ ಆಲಿಯಾ ಭಟ್ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಗೆಂದು ಆಲಿಯಾ ಭಟ್, ಮುಂಬೈನಲ್ಲಿರುವ ಎಚ್.ಎನ್. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 12.05ರ ಸಮಯಕ್ಕೆ ಮಗು ಜನಿಸಿದೆ. ಮಗು ಮತ್ತು ತಾಯಿ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಲಿಯಾ ಭಟ್ ಆಸ್ಪತ್ರೆಗೆ ದಾಖಲಾಗುವಾಗ ಪತಿ ರಣಬೀರ್ ಕಪೂರ್ ಸಹ ಜೊತೆಯಲ್ಲಿಯೇ ಆಮಿಸಿದ್ದರು ಎಂದು ತಿಳಿದುಬಂದಿದೆ.
ವರ್ಷಗಳ ಡೇಟಿಂಗ್ ನಂತರ ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ಏಪ್ರಿಲ್‌ನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಜೂನ್‌ನಲ್ಲಿ ತಾವು ತಾಯಿಯಾಗುತ್ತಿರುವ ಗುಡ್ ನ್ಯೂಸ್ ತಿಳಿಸಿ, ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ಇದೀಗ ರಣ್‌ಬೀರ್ ದಂಪತಿ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ

ಕಪೂರ್ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ನೆಚ್ಚಿನ ನಟಿ ಆಲಿಯಾ ತಾಯಿ ಆಗಿರುವ ಗುಡ್ ನ್ಯೂಸ್ ಕೇಳಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಶುಭ ಹಾರೈಸಿದ್ದಾರೆ