LATEST NEWS
ನ್ಯಾಯಮೂರ್ತಿ ಧುಲಿಯಾ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ – ಆಲಿಯಾ ಅಸ್ಸಾದಿ
ಉಡುಪಿ ಅಕ್ಟೋಬರ್ 14: ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ದುಲಿಯಾ ಅವರು ನೀಡಿದ ತೀರ್ಪಿನ ಬಗ್ಗೆ ಹಿಜಬ್ ಪರ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹಿಜಬ್ ಹೋರಾಟದ ನೇತೃತ್ವ ವಹಿಸಿದ ವಿದ್ಯಾರ್ಥಿನಿ. ಮಾರ್ಚ್ 15ರ ಹೈಕೋರ್ಟ್ ತೀರ್ಪಿನ ನಂತರ ಆಲಿಯಾ ಮತ್ತು ತಂಡ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿಲ್ಲ. ಇದೀಗ ಸುಪ್ರೀಂಕೋರ್ಟ್‍ನಲ್ಲಿ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಭರವೆಸಯ ಟ್ವೀಟ್ ಮಾಡಿದ್ದಾರೆ.
ಈ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಗೌರವಾನ್ವಿತ ನ್ಯಾಯಮೂರ್ತಿ ದುಲಿಯಾ ಅವರ ಹೇಳಿಕೆಯು ನ್ಯಾಯಯುತ ತೀರ್ಪಿನಲ್ಲಿನ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ. ಕನಿಷ್ಠ ಪಕ್ಷದಲ್ಲಿ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ ಎಂದಿದ್ದಾರೆ.