Connect with us

LATEST NEWS

ಪಬ್ ದಾಳಿ ಪ್ರಕರಣದ ಆರೋಪಿಗಳನ್ನು ಖುಲಾಸೆ ಗೊಳಿಸಿದ ನ್ಯಾಯಾಲಯ

ಪಬ್ ದಾಳಿ ಪ್ರಕರಣದ ಆರೋಪಿಗಳನ್ನು ಖುಲಾಸೆ ಗೊಳಿಸಿದ ನ್ಯಾಯಾಲಯ

ಮಂಗಳೂರು ಮಾರ್ಚ್ 12: ದೇಶದಾದ್ಯಂತ ಸಂಚಲನ ಮೂಡಿಸಿದ್ದ 2009ರ ಪಬ್ ದಾಳಿ ಪ್ರಕರಣದ 26 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.

2009ರ ಜನವರಿ 24 ರಂದು ರಾತ್ರಿ ನಗರದ ಅಮ್ನೇಶಿಯ ಪಬ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪಾರ್ಟಿಯಲ್ಲಿದ್ದ ಶ್ರೀಮಂತ ಯುವತಿಯರ ಮೇಲೆ ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ ಪ್ರಸಾದ್ ಅತ್ತಾವರ, ಸುಭಾಶ್ ಪಡೀಲ್, ದಿನಕರ ಶೆಟ್ಟಿ ಸೇರಿದಂತೆ 26 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಸುಧೀರ್ಘ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ 3ನೇ ಜಿಲ್ಲಾ ಸೆಷನ್ಸ್ ಕೋರ್ಟ್ ಸಾಕ್ಷ್ಯಾಧಾರ ಕೊರತೆಯಿಂದಾಗಿ ಪ್ರಕರಣದ ಆರೋಪಿಗಳನ್ನು ಖುಲಾಸೆ ಮಾಡಿ ತೀರ್ಪು ನೀಡಿದ್ದಾರೆ.

Facebook Comments

comments