Connect with us

LATEST NEWS

ದಕ್ಷಿಣಕನ್ನಡ ಜಿಲ್ಲಾ ಎಲ್ಲಾ ಗಡಿಗಳು ಓಪನ್

ಮಂಗಳೂರು ಅಗಸ್ಟ್ 25: ರಾಜ್ಯ ಸರಕಾರದ ಆದೇಶದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರ್ ರಾಜ್ಯ ಸಂಚಾರಕ್ಕೆ ಇದ್ದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು ರಾಜ್ಯ ಸರಕಾರದ ಪರಿಷ್ಕೃತ ಮಾರ್ಗಸೂಚಿ ಪ್ರಕಾರವಾಗಿ, ಇತರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರು ಕ್ವಾರಂಟೈನ್‌ಗೆ ಒಳಗಾಗಬೇಕಾಗಿಲ್ಲ ಹಾಗೂ ಗಡಿಯಲ್ಲಿ ಅವರು ತಪಾಸಣೆಗೆ ಒಳಗಾಗಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಅವರು ಸ್ಪಷ್ಟಪಡಿಸಿದ್ದಾರೆ.


ಸೋಮವಾರ ಸಂಜೆಯಿಂದ ಎಲ್ಲಾ ಗಡಿಗಳನ್ನು ಪ್ರಯಾಣ ಮುಕ್ತವಾಗಿಸಿದ್ದು ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬರುವ ಜನರಿಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಅವರು ತಿಳಿಸಿದ್ದಾರೆ. ಆದರೆ ಇತರ ರಾಜ್ಯಗಳಿಗೆ ತೆರಳುವ ಕರ್ನಾಟಕದ ಜನರು ಆಯಾ ರಾಜ್ಯಗಳಲ್ಲಿ ಚಾಲ್ತಿಯಲ್ಲಿರುವ ನಿಯಮಗಳನ್ನು ಪಾಲಿಸಬೇಕಾಗಿದೆ.

Facebook Comments

comments