Connect with us

LATEST NEWS

ನಾಳೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿ ಓಪನ್

ಮಂಗಳೂರು ಜೂನ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಬೆಳಿಗ್ಗೆಯಿಂದ ಅಪರಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು ಜಿಲ್ಲೆಯ ಎಲ್ಲಾ ಶಾಸಕರು ಲಾಕ್ ಡೌನ್ ಸಮಯದಲ್ಲಿ ಬದಲಾವಣೆ ಹಾಗೂ ಅಂಗಡಿ ತೆರೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಲು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿ ಮನವಿ ಮಾಡಿದ್ದರು, ಈ ಹಿನ್ನಲೆ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿಗಳನ್ನು ಈ ಕುರಿತಂತೆ ಮನವಿ ಮಾಡಿದ್ದು, ಸಿಎಂ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ರೀತಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಆದೇಶಿಸಲಾಗಿದೆ.
ಇಂದು ಸಂಜೆ ರಾಜ್ಯ ಮುಖ್ಯ ಕಾರ್ಯದರ್ಶಿ ಅವರು ಈ ಕುರಿತಂತೆ ಆದೇಶ ಹೊರಡಿಸಲಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply