Connect with us

LATEST NEWS

ಓಮಿಕ್ರಾನ್ ಆತಂಕ – ಉತ್ತರ ಪ್ರದೇಶ ಚುನಾವಣೆ ಮುಂದೂಡಿ ಎಂದು ಅಲಹಾಬಾದ್‌ ಹೈಕೋರ್ಟ್‌ ಸಲಹೆ

ಲಕ್ನೋ: ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವು ಏರುತ್ತಲೇ ಇದೆ. ಈ ಹಿನ್ನಲೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಚುನಾವಣೆಯನ್ನು ಮುಂದೂಡಿ, ಪ್ರಚಾರಕ್ಕಾಗಿ ನಡೆಸುವ ಸಭೆ-ಸಮಾರಂಭ, ರ‍್ಯಾಲಿಗಳನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗ ಹಾಗೂ ಪ್ರಧಾನಿ ಮೋದಿ ಅವರಿಗೆ ಅಲಹಾಬಾದ್‌ ಹೈಕೋರ್ಟ್‌ ಸಲಹೆ ನೀಡಿದೆ.


ಒಂದು ವೇಳೆ ರ‍್ಯಾಲಿಗಳನ್ನು ನಿಲ್ಲಿಸದಿದ್ದರೆ, ಕೊರೊನಾ ಎರಡನೇ ಅಲೆಗಿಂತ ಭೀಕರವಾಗಿ ಮೂರನೇ ಅಲೆಯು ವ್ಯಾಪಕವಾಗಿ ಹರಡಿ ಆತಂಕ ಸೃಷ್ಟಿಸಬಹುದು ಎಂದು ಕೋರ್ಟ್‌ ಎಚ್ಚರಿಸಿದೆ. ಈಗಾಗಲೇ ಹಲವು ದೇಶಗಳಲ್ಲಿ ಕೊರೊನಾ ಮೂರನೇ ಅಲೆಯ ಪರಿಣಾಮ ಉಂಟಾಗಿದೆ. ಎರಡನೇ ಅಲೆಯ ಸಂದರ್ಭದಲ್ಲಿ ಭಾರತದ ಜನತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದಾರೆ. ಸೋಂಕಿನಿಂದಾಗಿ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಚೀನಾ, ಜರ್ಮನಿ, ನೆದರ್ಲ್ಯಾಂಡ್‌ನಂಥ ದೇಶಗಳು ಭಾಗಶಃ ಲಾಕ್‌ಡೌನ್‌ ವಿಧಿಸಿವೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.


ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ರ‍್ಯಾಲಿ, ಸಮಾರಂಭಗಳನ್ನು ನಡೆಸಿ ಜನರನ್ನು ಸಜ್ಜುಗೊಳಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಸಾಮಾಜಿಕ ಅಂತರ, ಕೋವಿಡ್‌ ನಿಯಮಗಳು ಪಾಲನೆಯಾಗುವುದೇ ಇಲ್ಲ. ಇದನ್ನು ಸರಿಯಾದ ಸಮಯಕ್ಕೆ ತಡೆಯದಿದ್ದರೆ, ಕೊರೊನಾ ಸಾಂಕ್ರಾಮಿಕವು ಎರಡನೇ ಅಲೆಗಿಂತ ಮೂರನೇ ಅಲೆಯಲ್ಲಿ ಭೀಕರ ಪರಿಣಾಮ ಬೀರಬಹುದು ಎಂದು ಕಳವಳ ವ್ಯಕ್ತಪಡಿಸಿದೆ.

Advertisement
Click to comment

You must be logged in to post a comment Login

Leave a Reply