BANTWAL
ಕೊರಗಜ್ಜನಿಗೆ ಅಪಮಾನ ಪ್ರಕರಣ – ಇಬ್ಬರ ಬಂಧನ
ವಿಟ್ಲ: ಮದುವೆ ಕಾರ್ಯಕ್ರಮವೊಂದರಲ್ಲಿ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬ್ (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್ (19) ಎಂದು ಗುರುತಿಸಲಾಗಿದೆ.
ಮುಸ್ಲಿಂ ಧರ್ಮದ ಮದುವೆ ಕಾರ್ಯಕ್ರಮವೊಂದಲ್ಲಿ ಮದುಮಗನ ಗೆಳೆಯರ ತಂಡ ಮದುಮಗನಿಗೆ ಕೊರಗಜ್ಜನ ಹೋಲುವ ವೇಷ ಭೂಷಣ ಧರಿಸಿ ಅವಹೇಳನ ಮಾಡಿದ್ದರು. ಮದುಮಗ ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿತ್ತು.
ಈ ಹಿನ್ನಲೆ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
You must be logged in to post a comment Login