ಪುತ್ತೂರು, ಎಪ್ರಿಲ್ 26: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಂದ ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆಯನ್ನು ಇಂದು ಬಿಡುಗಡೆಗೊಳಿಸಲಾಯಿತು.
ಪುತ್ತೂರು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪ್ರಣಾಲಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಅಂಶಗಳನ್ನು ಜಾರಿಗೆ ಎಲ್ಲಾ ಕ್ರಮಗಳನ್ನು ಶಾಸಕನಾಗಿ ಆಯ್ಕೆಯಾದರೆ ಕೈಗೊಳ್ಳುವುದಾಗಿ ಎಂದರು.
ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಕೆಲವರು ಮಾಡುತ್ತಿದ್ದು, ಈ ಬಗ್ಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಣೆ-ಪ್ರಮಾಣಕ್ಕೂ ತಾನು ಸಿದ್ಧ ಎಂದರು.