LATEST NEWS
ದುಬೈಯಿಂದ ಬಂದ ಕೊರೋನಾ ಶಂಕಿತ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿ

ದುಬೈಯಿಂದ ಬಂದ ಕೊರೋನಾ ಶಂಕಿತ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿ
ಮಂಗಳೂರು ಮಾರ್ಚ್ 9: ಮಹಾಮಾರಿ ಕೊರೋನಾ ವೈರಸ್ ತಗುಲಿ ವಿಶ್ವಾದ್ಯಂತ ಸಾವಿರಾರು ಮಂದಿ ಸಾವನ್ನಪ್ಪಿದ್ದು, ಈ ನಡುವೆ ದುಬೈಯಿಂದ ಮಂಗಳೂರಿಗೆ ಅಗಮಿಸಿದ ಪ್ರಯಾಣಿಕನಲ್ಲಿ ಶಂಕಿತ ಕೊರೋನಾದ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಅತನನ್ನು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಇದು ಈಗ ಆತಂಕಕ್ಕೆ ಕಾರಣವಾಗಿದೆ.
ಕರೋನಾ ವೈರಸ್ ಹಿನ್ನಲೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗಮಿಸುವ ಎಲ್ಲಾ ಪ್ರಯಾಣಿಕರನ್ನು ಅರೋಗ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ ದುಬೈಯಿನಿಂದ ಅಗಮಿಸಿದ ಪ್ರಯಾಣಿಕರೊಬ್ಬರಲ್ಲಿ ಜ್ವರದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಆತ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎಂಬ ಮಾಹಿತಿ ದೊರಕಿದೆ. ಈತ ಉಳ್ಳಾಲದ ವ್ಯಕ್ತಿ ಎಂದು ಗೊತ್ತಾಗಿದ್ದು ಆತನ ಪತ್ತೆಗಾಗಿ ಕಾರ್ಯಾಚರಣೆ ಆರಂಭಗೊಂಡಿದೆ.

ಈ ಸಂಬಂಧ ಆರೋಗ್ಯಾಧಿಕಾರಿ ಕೂಡಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ನೀಡಿದ್ದಾರೆ.