LATEST NEWS
ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಹಿಜಾಬ್ ನೊಂದಿಗೆ ಶಿಕ್ಷಣ ಪಡೆಯಲು ಅವಕಾಶ ನೀಡಿ – ಫಾತಿಮ ನಸೀಮಾ
ಮಂಗಳೂರು ಅಗಸ್ಟ್ 13: ಜನಾಂಗೀಯ ದ್ವೇಷದಿಂದ ಮುಸ್ಲಿಮ್ ವಿದ್ಯಾರ್ಥಿನಿಯರ ಸಾಂವಿಧಾನಿಕ ಹಕ್ಕಾಗಿರುವ ಹಿಜಾಬನ್ನು ವಿವಾದದ ವಸ್ತುವಾಗಿಸಿ, ಅವರ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ಸಂಘ ಪರಿವಾರಕ್ಕೆಮತ್ತು ಶಿಕ್ಷಣ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗ ವಾಗಿದ್ದು, ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಿಕ್ಕ ಜಯವಾಗಿದೆ.
ದೇಶದ ಸಂವಿಧಾನಾತ್ಮಕ, ಪ್ರಜಾಸತ್ತಾತ್ಮಕ ವ್ಯವಸ್ಥೆಯು ಕೋಮುವಾದಿಗಳ ಭ್ರಷ್ಟ ಕೈಗಳಲ್ಲಿ ನಲುಗಿ ಹೋಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಈ ತೀರ್ಪು ಅತ್ಯಂತ ಮಹತ್ವದ್ದಾಗಿದ್ದು, ಸಾಮಾಜಿಕ ಹಿತಾಸಕ್ತಿಗಾಗಿ ಶ್ರಮಿಸುತ್ತಿರುವ ಜನತೆಯಲ್ಲಿ ಆಶಾಭಾವನೆಯನ್ನು ಉಂಟುಮಾಡಿದೆ. ಧರ್ಮದ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ವಿಭಜಿಸುವ ಫ್ಯಾಸಿಸ್ಟ್ ಶಕ್ತಿಗಳಿಗೆ ತಕ್ಕ ಪ್ರತ್ಯುತ್ತರ ನೀಡಿ ವಿದ್ಯಾರ್ಥಿನಿಯರ ಮೂಲಭೂತ ಹಕ್ಕನ್ನು ಎತ್ತಿ ಹಿಡಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಖನ್ನಾ ರನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಅಭಿನಂದಿಸುತ್ತದೆ.
ಇದೇ ರೀತಿ ಕರ್ನಾಟಕ ರಾಜ್ಯ ಸರ್ಕಾರವು ಸಂಘ ಪರಿವಾರದ ಯಾವುದೇ ಒತ್ತಡಗಳಿಗೆ ಮಣಿಯದೆ ಸುಪ್ರೀಂ ಕೋರ್ಟಿನ ಈ ಮಧ್ಯಂತರ ಆದೇಶದಂತೆ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಹಿಜಾಬ್ ನೊಂದಿಗೆ ಶಿಕ್ಷಣ ಪಡೆಯಲು ಶೀಘ್ರ ಅನುಕೂಲ ಮಾಡಿಕೊಡಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಒತ್ತಾಯಿಸುತ್ತದೆ ಎಂದು ರಾಜ್ಯಾಧ್ಯಕ್ಷೆ ಫಾತಿಮ ನಸೀಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು
You must be logged in to post a comment Login