Connect with us

    KARNATAKA

    ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಮೇ 31ರ ವರೆಗೆ ಅವಕಾಶ ಜೂನ್ 1ರಿಂದ ತೆರಬೇಕು ಭಾರಿ ದಂಡ!

    ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ.

    ಸಾಂದರ್ಭಿಕ ಚಿತ್ರ

    2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ರಾಜ್ಯದಲ್ಲಿ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

    ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ, ರಾಜ್ಯದಲ್ಲಿ ಕೇವಲ 34 ಲಕ್ಷ ಎಚ್‌ಎಸ್‌ಆರ್ಪಿಗಳು ಮಾತ್ರ ನೋಂದಾಯಿಸಲ್ಪಟ್ಟಿವೆ. ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ) ಸಿ.ಮಲ್ಲಿಕಾರ್ಜುನ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿಗಳು ನಡೆದಿವೆ ಮತ್ತು ಹೆಚ್ಚಿನ ವಾಹನಗಳು ಇನ್ನೂ ಎಚ್‌ಎಸ್‌ಆರ್ಪಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.

    ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್‌ & ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಕಾಶ ನೀಡಿದೆ.

    ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *