LATEST NEWS
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ವಿಶ್ವ ಹಿಂದೂ ಪರಿಷತ್ ಆಕ್ರೋಶ
ಪುತ್ತೂರು, ಡಿಸೆಂಬರ್ 23: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ದ ವಿಶ್ವ ಹಿಂದೂ ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ.
ಹಿಜಾಬ್ ಧರಿಸಿ ಧಾರ್ಮಿಕ ಸ್ವಾತಂತ್ರ್ಯ ಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ, ಸಮಾನತೆ ಸಾರುವ ಉದ್ಧೇಶದಿಂದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರಗಳಲ್ಲಿ ಸಮವಸ್ತ್ರ ವ್ಯವಸ್ಥೆ ಮಾಡಲಾಗಿದೆ.
ಆದರೆ ಒಂದು ವರ್ಗದ ಜನರನ್ನು ಪ್ರತ್ಯೇಕವಾಗಿ ನೋಡುವ ಕೆಲಸ ಸಿದ್ಧರಾಮಯ್ಯ ಮಾಡುತ್ತಿದ್ದಾರೆ. ಒಂದು ವರ್ಗಕ್ಕೆ ಧಾರ್ಮಿಕ ಹಕ್ಕಿನ ಸ್ವಾತಂತ್ರ್ಯ ನೀಡುವುದಾದರೆ ಇನ್ನೊಂದು ವರ್ಗಕ್ಕೂ ನೀಡಬೇಕು. ಹಿಜಾಬ್ ಧರಿಸಿ ವಿದ್ಯಾಕೇಂದ್ರಗಳಿಗೆ ಬಂದಲ್ಲಿ ಹಿಂದೂ ವಿದ್ಯಾರ್ಥಿಗಳು ತಮ್ಮ ಸಂಪ್ರದಾಯದ ಪ್ರಕಾರ ಬರುತ್ತಾರೆ.
ಕೇಸರಿ ಶಾಲು ಹಾಕಿ ಮತ್ತೆ ಹಿಂದೂ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹಾಜರಾಗುತ್ತಾರೆ, ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಸರಕಾರಕ್ಕೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಎಚ್ಚರಿಕೆ ನೀಡಿದ್ದಾರೆ.