DAKSHINA KANNADA
ಸೆಪ್ಟೆಂಬರ್ 16 ರಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ – ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿ
ಮಂಗಳೂರು ಸೆಪ್ಟೆಂಬರ್ 4: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ನೀಡಲು ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿ ನಿರ್ಧರಿಸಿದೆ. ಈ ಕುರಿತು ಬುಧವಾರ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಮಹತ್ವದ ಸಭೆ ಕರೆಯಲಾಗಿದೆ.
ದಕ್ಷಿಣಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲು ಸಭೆ
ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿಯಲ್ಲಿ 40 ಸಂಘಟನೆಗಳಿದ್ದು ಸಪ್ಟೆಂಬರ್ 6 ರಂದು ಬುಧವಾರ ನಗರದ ಆರ್ಯ ಸಮಾಜದಲ್ಲಿ ಜಿಲ್ಲಾ ಬಂದ್ ಕರೆ ನೀಡುವ ಕುರಿತು ತೀರ್ಮಾನ ಕೈಗೊಳ್ಳಲು ಸಭೆ ಕರೆಯಲಾಗಿದೆ.
ಕಾವ್ಯ ಪ್ರಕರಣದ ತನಿಖೆ ಪೂರ್ಣಗೊಂಡಿದ್ದರು, ಪೊಲೀಸ್ ಇಲಾಖೆ ದಾಖಲೆಗಳ ಮೂಲಕ ಸತ್ಯಾಂಶ ಬಯಲುಗೆಳೆಯದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜಸ್ಟಿಸ್ ಫಾರ್ ಕಾವ್ಯ ಹೋರಾಟ ಸಮಿತಿ ಸೆಪ್ಟೆಂಬರ್ 16 ರಂದು ಸ್ವಯಂ ಪ್ರೇರಿತ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡುವ ಸಂಭವ ವಿದೆ.
ಈ ನಿಟ್ಟಿನಲ್ಲಿ ಎಲ್ಲಾ 40 ಸಂಘಟನೆಗಳ ಮುಖಂಡರಿಗೆ ಸಭೆಗೆ ಆಹ್ವಾನಿಸಲಾಗಿದೆ. ಬುಧವಾರ ಆರ್ಯ ಸಮಾಜದಲ್ಲಿ ನಡೆಯಲಿರುವ ಸಭೆಯಲ್ಲಿ ಬಂದ್ ಕುರಿತು ಮಹತ್ವದ ನಿರ್ಧಾರ ಹೊರಬೀಳಲಿದೆ .
You must be logged in to post a comment Login