DAKSHINA KANNADA
ಆಳ್ವಾಸ್ ನುಡಿಸಿರಿ 2017 ಸರ್ವಾಧ್ಯಕ್ಷರಾಗಿ ಡಾ.ನಾಗತಿಹಳ್ಳಿ ಚಂದ್ರಶೇಖರ್
ಆಳ್ವಾಸ್ ನುಡಿಸಿರಿ 2017 ಸರ್ವಾಧ್ಯಕ್ಷರಾಗಿ ಡಾ.ನಾಗತಿಹಳ್ಳಿ ಚಂದ್ರಶೇಖರ್
ಮಂಗಳೂರು ಅಕ್ಟೋಬರ್ 24: ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿಸೆಂಬರ್ 1 ರಿಂದ 3 ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ 14ನೇ ವರ್ಷದ ಆಳ್ವಾಸ್ ನುಡಿಸಿರಿ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಕರಾಗಿ ಸಾಹಿತಿ ಡಾ.ಸಿ.ಎನ್.ರಾಮಚಂದ್ರನ್ ಹಾಗು ಸಮ್ಮೆಳನದ ಸರ್ವಾಧ್ಯಕ್ಷರಾಗಿ ಖ್ಯಾತ ಚಿತ್ರ ನಿರ್ದೆಶಕ ಡಾ.ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕನ್ನಡ ನಾಡು ನುಡಿ ಸಂಸ್ಕೃತಿಯ ಆಳ್ವಾಸ್ ನುಡಿಸಿರಿ 14ನೇ ಸಮ್ಮೇಳನ ಇದಾಗಿದ್ದು ರಾಜ್ಯದ ವಿವಿಧ ಭಾಗಗಳಿಂದ ಸಾಹಿತ್ಯ ಆಸಕ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
You must be logged in to post a comment Login