LATEST NEWS
ಅಕ್ಟೋಬರ್ 6 ಮತ್ತು 7 ರಂದು ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

ಮಂಗಳೂರು, ಅಕ್ಟೋಬರ್ 4: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಆಳ್ವಾಸ್ ಪ್ರಗತಿ 2023 ಉದ್ಯೋಗ ಮೇಳ ಅಕ್ಟೋಬರ್ 6 ಮತ್ತು 7 ರಂದು ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಆಳ್ವಾಸ್ ಪ್ರಗತಿ- 2023’ ಉದ್ಯೋಗ ಮೇಳದಲ್ಲಿ ಈಗಾಗಲೇ 192 ಪ್ರಮುಖ ಕಂಪನಿಗಳು ನೋಂದಾಯಿಸಿಕೊಂಡಿದ್ದು, 13,605 ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಅಕ್ಟೋಬರ್ 6ರಂದು ಬೆಳಗ್ಗೆ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಬೆಳ್ತಂಗಡಿ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಮತ್ತು ಡಿ. ವೇದವ್ಯಾಸ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಯುಎಇ ಮೂಲದ ಬುರ್ಜಿಲ್ ಹೋಲ್ಡಿಂಗ್ಸ್‌ನ ಮಾನವ ಸಂಪನ್ಮೂಲದ ಸಮೂಹ ಮುಖ್ಯಸ್ಥ ಡಾ. ಸಂಜಯ್ ಕುಮಾರ್, ಅಲೆಂಬಿಕ್ ಫಾರ್ಮಾಸ್ಯೂಟಿಕಲ್ಸ್‌ನ ಮಾನವ ಸಂಪನ್ಮೂಲದ ಸಹ ಉಪಾಧ್ಯಕ್ಷ ಅರವಿಂದ ತ್ರಿಪಾಟಿ, ಫ್ಯಾಕ್ಟ್‌ಸೆಟ್ ಸಿಸ್ಟಮ್ ಇಂಡಿಯಾ ಪ್ರೈ. ಲಿ. ಉಪಾಧ್ಯಕ್ಷ ಹಾಗೂ ಭಾರತ ಮತ್ತು ಫಿಲಿಫೈನ್ಸ್ ಟಾಲೆಂಟ್ ಅಕ್ವಸಿಷನ್ ಸಹ ನಿರ್ದೇಶಕರಾದ ಅನುಪ್ಮ ರಂಜನ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ. ಮೋಹನ್ ಅಳ್ವ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಹೇಳಿದರು
ಹೆಚ್ಚಿನ ವಿವರಗಳಿಗಾಗಿwww.alvaspragati.com ಗೆ ಭೇಟಿ ನೀಡಬಹುದು. ದೂರದ ಊರುಗಳಿಂದ ಬರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 5ರಿಂದ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂ. 9008907716, 9663190590 ಸಂಪರ್ಕಿಸಬಹುದು. ಐಟಿಐ, ಪಿಯುಸಿ ಮತ್ತು ಎಸೆಸೆಲ್ಸಿ ಹಾಗೂ ಇದಕ್ಕಿಂತ ಕೆಳ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ಹೊರತುಪಡಿಸಿ ಎಲ್ಲರಿಗೂ ನೋಂದಣಿ ಕಡ್ಡಾಯವಾಗಿದೆ ಎಂದು ವಿವೇಕ್ ಆಳ್ವ ತಿಳಿಸಿದರು.