LATEST NEWS
ಅಗಸ್ಟ್ 1 ಮತ್ತು 2 ರಂದು ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

ಮಂಗಳೂರು ಅಗಸ್ಟ್ 27: ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿಅಗಸ್ಟ್ 1 ರಿಂದ 2 ರವರೆಗೆ 15ನೇ ಆವೃತ್ತಿಯ ಉದ್ಯೋಗ ಮೇಳವು ನಡೆಯಲಿದ್ದು, ವಿವಿಧ ವಲಯಗಳ 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 15,900ಕ್ಕೂ ಅಧಿಕ ಉದ್ಯೋಗಾವಕಾಶಗಳು ತೆರೆದುಕೊಂಡಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಮಾನ್ಯುಫ್ಯಾಕ್ಟರಿಂಗ್, ಲಾಜಿಸ್ಟಿಕ್ಸ್, ಐಟಿ, ಐಟಿಇಎಸ್, ಬ್ಯಾಂಕಿಂಗ್ ಹಾಗೂ ಹಣಕಾಸು, ಹೆಲ್ತ್‌ಕೇರ್, ಫಾರ್ಮಾ, ಮಾಧ್ಯಮ, ಮಾರಾಟ ಮತ್ತು ಚಿಲ್ಲರೆ, ಆತಿಥ್ಯ ವಲಯಗಳ ಪ್ರಮುಖ ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ’ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವವರಿಗೆ ಜುಲೈ 31ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿ ಹಾಗೂ ಪಾಲ್ಗೊಳ್ಳುವ ಕಂಪನಿಗಳ ವಿವರಕ್ಕೆ www.alvaspragati.com ಈ ತಾಣಕ್ಕೆ ಭೇಟಿ ನೀಡಬಹುದು ಎಂದು ಹೇಳಿದರು. ಮಾಹಿತಿಗೆ ಸಂಪರ್ಕ ಸಂಖ್ಯೆ: 9741440490, 7975223865.