Connect with us

    LATEST NEWS

    ಮೂಡಬಿದ್ರೆ ಆಳ್ವಾಸ್ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

    ಮೂಡಬಿದ್ರೆ ಆಳ್ವಾಸ್ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

    ಮಂಗಳೂರು ಮಾರ್ಚ್ 19: ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.

    ತುಮಕೂರು ಮೂಲದ 18 ವರ್ಷದ ಪ್ರೀತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಈಕೆ ಆಳ್ವಾಸ್ ಸಂಸ್ಥೆಯ ಪ್ರಥಮ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರೀತಿ ಸೋಮವಾರ ಬೆಳಗ್ಗೆ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ತರಗತಿಗೆ ಹಾಜರಾಗಿದ್ದ ಪ್ರೀತಿ ಊಟಕ್ಕೆ ಹೋಗಿದ್ದವಳು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಸಹಪಾಠಿಗಳು ತಿಳಿಸಿದ್ದಾರೆ.

    ಈ ಕುರಿತು ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply