LATEST NEWS
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಆಳ್ವಾಸ್ನ ಇಬ್ಬರು ಕ್ರೀಡಾಪಟುಗಳು
ಮೂಡುಬಿದಿರೆ ಜುಲೈ 14: ಇದೇ ತಿಂಗಳ 23 ರಂದು ಜಪಾನ್ ನ ಟೋಕಿಯೋದಲ್ಲಿ ಪ್ರಾರಂಭವಾಗಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ಕ್ರೀಡಾ ವಿಧ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಳ್ವಾಸ್ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರು ಕ್ರೀಡಾಪಟುಗಳು 2016-17 ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾನಿಲಯಕೂಟಗಳಲ್ಲಿ ಪ್ರತಿನಿಧಿಸಿದ್ದರು.
ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್ಸ್ನಲ್ಲಿ ಭಾಗವಹಿಸಿ ಸಾಧನೆ ಮಾಡಿದ್ದು ಈ ಬಾರಿಯ ಒಲಿಂಪಿಕ್ಸ್ಗೆ ಆಯ್ಕೆಯಾದ ಇಬ್ಬರು ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಡಾ.ಎಂ. ಮೋಹನ ಆಳ್ವರು ತಲಾ 1ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ನೀಡಿದ್ದಾರೆ.
You must be logged in to post a comment Login