Connect with us

LATEST NEWS

ನವೆಂಬರ್ 15 ರಂದು ಆಳ್ವಾಸ್ ವಿಧ್ಯಾರ್ಥಿಸಿರಿ

ನವೆಂಬರ್ 15 ರಂದು ಆಳ್ವಾಸ್ ವಿಧ್ಯಾರ್ಥಿಸಿರಿ

ಮಂಗಳೂರು ಸೆಪ್ಟೆಂಬರ್ 6 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕಳೆದ ಆರು ವರ್ಷಗಳಿಂದ ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ’ಯ 2018ನೇ ಸಾಲಿನ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ನವೆಂಬರ್ 15ರಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ.

ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇದೇ 15 ರಂದು ಬೆಳಗ್ಗೆ 10ರಿಂದ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ.

ಭಾಷಣ, ಸಾಹಿತ್ಯ, ಸಾಂಸ್ಕೃತಿಕ ಮೊದಲಾದ ಕ್ಷೇತ್ರಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು, ಚಿಕ್ಕಮಗಳೂರು ಹಾಗೂ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯ ಹೈಸ್ಕೂಲು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ, ಸ್ವಪರಿಚಯದ ವಿವರ ಹಾಗೂ ಪಡೆದ ಪ್ರಮಾಣ ಪತ್ರಗಳ ಜತೆಗೆ ಸರಿಯಾದ ಸಮಯಕ್ಕೆ ಹಾಜರಿರಬೇಕು.

ತಜ್ಞರ ಆಯ್ಕೆ ಸಮಿತಿಯು ವಿದ್ಯಾರ್ಥಿಗಳ ಸಾಧನೆಯನ್ನು ಪರಿಶೀಲಿಸಿ ಅಧ್ಯಕ್ಷರ ಆಯ್ಕೆ ಮಾಡಲಿದ್ದಾರೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಆಶು ಭಾಷಣ ಹಾಗೂ ಸಂದರ್ಶನಗಳನ್ನು ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ಸಮ್ಮೇಳನದ ಸಮಾರೋಪ ಭಾಷಣ ಮಾಡುವವರನ್ನು, ಕವಿಗೋಷ್ಠಿಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.

ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಅರ್ಹರಿಗೆ ಸಮ್ಮೇಳನದಲ್ಲಿ ಉಪನ್ಯಾಸ, ನಿರೂಪಣೆಗೆ ಅವಕಾಶಗಳನ್ನು ನೀಡಲಾಗುವುದು. ವಿಶಿಷ್ಟ ವೈಯಕ್ತಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಿದ್ದು ಅವರು ತಮ್ಮ ಸ್ವವಿವರವನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ-574227 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ವಿವರಗಳಿಗೆ 9481326858 ಅಥವಾ 8310300875 ಸಂಖ್ಯೆಯನ್ನು ಸಂಪರ್ಕಿಸಬಹುದು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *