LATEST NEWS
ಆಳ್ವಾಸ್ ವಿರಾಸತ್ 2023ಗೆ ಅದ್ದೂರಿ ಚಾಲನೆ
ಮಂಗಳೂರು ಡಿಸೆಂಬರ್ 14: ಆಳ್ವಾಸ್ ಮೂಡಬಿದಿರೆಯಲ್ಲಿ ನಡೆಯಲಿರುವ ನಾಲ್ಕು ದಿನಗಳ ರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮ ಆಳ್ವಾಸ್ ವಿರಾಸತ್ 2023ಗೆ ಅದ್ದೂರಿ ಚಾಲನೆ ನೀಡಲಾಯಿತು.
ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು 2ನೇ ಬಾರಿ ಇಲ್ಲಿನ ಕಾರ್ಯಕ್ರಮಕ್ಕೆ ಆಗಮಿಸುತ್ತಿರೋದು ವಿಶೇಷ ಅನುಭೂತಿ ನೀಡಿದೆ. ಇಷ್ಟು ದೊಡ್ಡ ಪ್ರಮಾಣದ ಮಕ್ಕಳನ್ನು ಶಿಸ್ತಿನಿಂದ ಬೆಳೆಸೋದು ದೊಡ್ಡ ವಿಷಯ. ಅದು ಆಳ್ವಾಸ್ ನಲ್ಲಿ ಪೋಷಕರ ನಿರೀಕ್ಷೆಯಂತೆ ಬೆಳೆಸುತ್ತಿದ್ದಾರೆ. ಯಶಸ್ವಿ ವಿರಾಸತ್ ಮುಂದಿನ ಎಲ್ಲ ಕಾರ್ಯಗಳಿಗೆ ಪ್ರೇರಣೆ ಆಗಲಿ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಆಳ್ವರು ದೊಡ್ಡ ಯಾಗ ಮಾಡುತ್ತಿದ್ದಾರೆ. ಇದು ಜ್ಞಾನ ಜಾತ್ರೆ ಮತ್ತು ಜ್ಞಾನ ಯಾತ್ರೆ. ಮುಂದಿನ ಜನಾಂಗಕ್ಕೆ ಸಂಸ್ಕಾರ ಸಂಸ್ಕೃತಿ ದೊಡ್ಡ ಕೆಲಸ. ವಿಜ್ಞಾನ ಜ್ಞಾನದೊಂದಿಗೆ ಸಂಸ್ಕಾರ ಸಂಸ್ಕೃತಿ ಬೆಳೆಯಬೇಕಿದೆ. ಈಗ ಭಾರತ ಕನ್ನಡದ ಬಡ ರಾಷ್ಟ್ರವಾಗಿ ಭಾರತ ಉಳಿದಿಲ್ಲ, ಹಿಂದಿಯ ಬಡಾ ರಾಷ್ಟ್ರ ಆಗುತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.