LATEST NEWS
ಮುಲ್ಕಿ ಮೂಡಬಿದಿರೆ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ – ಉಲ್ಟಾ ಹೊಡೆದ ಅಮರನಾಥ ಶೆಟ್ಟಿ
ಮುಲ್ಕಿ – ಮೂಡಬಿದಿರೆ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ – ಉಲ್ಟಾ ಹೊಡೆದ ಅಮರನಾಥ ಶೆಟ್ಟಿ
ಮಂಗಳೂರು ಎಪ್ರಿಲ್ 21: ಮುಲ್ಕಿ ಮೂಡಬಿದಿರೆ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
ನಿನ್ನೆ ಜೆಡಿಎಸ್ ನ ಎರಡನೇ ಪಟ್ಟಿಯಲ್ಲಿ ಮೂಡಬಿದಿರೆ ಕ್ಷೇತ್ರದಿಂದ ಅಮರನಾಥ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು. ಆದರೆ ಈ ಹಿಂದೆ ಅಮರನಾಥ ಶೆಟ್ಟಿ ಅವರು ನಾನು ಈ ಬಾರಿ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಘೋಷಣೆ ಮಾಡಿದ್ದು, ಪಕ್ಷದಲ್ಲಿ ಯುವಕರಿಗೆ ಆದ್ಯತೆ ನೀಡಬೇಕೆಂದು ತಿಳಿಸಿದ್ದರು. ಆದರೂ ಜೆಡಿಎಸ್ ಪಟ್ಟಿಯಲ್ಲಿ ಮತ್ತೆ ಅಮರನಾಥ ಶೆಟ್ಟಿ ಅವರ ಹೆಸರು ಇರುವುದು ಜೆಡಿಎಸ್ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿತ್ತು.
ಇಂದು ಈ ಬಗ್ಗೆ ಸ್ಪಷ್ಟನೆ ನೀಡಿ ಅಮರನಾಥ ಶೆಟ್ಟಿ ಅವರು ನಾನು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲುವುದಿಲ್ಲ. ನನ್ನ ಬದಲಿಗೆ ಮುಲ್ಕಿಯ ಉದ್ಯಮಿ ಜೀವನ್ ಕೆ ಶೆಟ್ಟಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಭಯ ಚಂದ್ರ ಜೈನ್, ಹಾಗು ಬಿಜೆಪಿ ಉಮಾನಾಥ್ ಕೋಟ್ಯಾನ್ ಅವರನ್ನು ಕಣಕ್ಕಿಳಿಸಿದೆ. . ಆದರೆ ಈ ಎರಡು ಪಕ್ಷಗಳಲ್ಲಿ ಕೆಲ ಮುಖಂಡರು ಬಂಡಾಯದ ಬಾವುಟ ಹಾರಿಸಿದ್ದಾರೆ. ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಮುಖಂಡರು ಹಾಗು ಕಾಂಗ್ರೆಸ್ ವಿದ್ಯಾರ್ಥಿ ಘಟಕ ಎನ್ ಎಸ್ ಯು ಐ ಮುಖಂಡರು ಬಂಡಾಯವೆದ್ದು ತಮ್ಮ ಸ್ಥನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಯಿಂದ ಉಮಾನಾಥ್ ಕೋಟ್ಯಾನ್ ಅವರಿಗೆ ಟಿಕೆಟ್ ನೀಡಿರುವುದರಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಆದರೆ ಜಗದೀಶ್ ಅಧಿಕಾರಿ ಅವರ ಮನವೊಲಿಸುವಲ್ಲಿ ಬಿಜೆಪಿ ನಾಯಕರು ಸಫಲರಾಗಿದ್ದಾರೆ. ಚುನಾವಣೆಯಲ್ಲಿ ಮುಲ್ಕಿ ಮೂಡಬಿದ್ರೆ ಕ್ಷಾತ್ರದ ಬಿಜೆಪಿ ಅಭ್ಯರ್ಥಿ ಪರ ಜಗದೀಶ್ ಅಧಿಕಾರಿ ಪ್ರಚಾರ ಆರಂಭಿಸಿದ್ದಾರೆ.
You must be logged in to post a comment Login