BANTWAL
ಬಂಟ್ವಾಳ – ರೋಗಿಯನ್ನು ಕೊಂಡೊಯ್ಯತ್ತಿದ್ದ ಅಂಬ್ಯುಲೆನ್ಸ್ ಪಲ್ಟಿ – ಚಾಲಕ ಶಬೀರ್ ಸಾವು…!!
ಬಂಟ್ವಾಳ ಅಗಸ್ಟ್ 18 : ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಅಂಚಿಕಟ್ಟೆ ಎಂಬಲ್ಲಿ ನಡೆದಿದ್ದು, ಈ ಅಪಘಾತದಲ್ಲಿ ಅಂಬ್ಯುಲೆನ್ಸ್ ಚಾಲಕ ಸಾವನಪ್ಪಿದ್ದಾನೆ.
ಮೃತರನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ. ತುರ್ತು ಚಿಕಿತ್ಸೆ ಅಗತ್ಯ ಇದ್ದ ರೋಗಿಯನ್ನು ಅಂಬ್ಯುಲೆನ್ಸ್ ನಲ್ಲಿ ಬೆಳ್ತಂಗಡಿಯಿಂದ ಮಂಗಳೂರು ಕಡೆಗೆ ಕರೆದುಕೊಂಡು ಬರಲಾಗುತ್ತಿತ್ತು, ಈ ವೇಳೆ ಅಂಬ್ಯುಲೆನ್ಸ್ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಅಂಬ್ಯುಲೆನ್ಸ್ ಚಾಲಕ ಹಾಗೂ ವಾಹನದಲ್ಲಿದ್ದ ರೋಗಿಯನ್ನು ಬೇರೆ ಗಾಡಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾಹನ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ.