Connect with us

    DAKSHINA KANNADA

    ಅಮಿತ್ ಶಾ ಭೇಟಿ ಹಿನ್ನಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

    ಪುತ್ತೂರು ಫೆಬ್ರವರಿ 11: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ ನೀಡುತ್ತಿರುವ ಹಿನ್ನಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ,


    ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ಈ ಭಾಗದ ಕಾರ್ಯಕರ್ತರು, ನಾಯಕರಿಗೆ ಉತ್ತೇಜನ ನೀಡಲು ಅಮಿತ್ ಶಾ ಭೇಟಿ ಮಹತ್ವವಾಗಿದ್ದು, ಇಂದು ಮಧ್ಯಾಹ್ನ ಅವರು ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಶ್ರೀ ಪಂಚಮುಖಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದು ಪೂಜೆ ನೆರವೇರಿಸಲಿದ್ದಾರೆ. ಬಳಿಕ ಅಲ್ಲಿ ಭಾರತ್ ಮಾತಾ ಮಂದಿರದ ಉದ್ಘಾಟನೆ ನೆರವೇರಿಸುವರು.


    ಬಳಿಕ ಪುತ್ತೂರಿಗೆ ತೆರಳುವ ಅವರು ಸಂಜೆ ವಿವೇಕಾನಂದ ಕಾಲೇಜಿನ ಮೈದಾನದಲ್ಲಿ ಕ್ಯಾಂಪ್ಕೊದ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಂಗಳೂರಿನಲ್ಲಿ ಪೂರ್ವನಿಗದಿತ ಸಭೆಗಳಲ್ಲಿ ಭಾಗವಹಿಸಿ ರಾತ್ರಿ ದೆಹಲಿಗೆ ತೆರಳಲಿದ್ದಾರೆ.
    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಲುವಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

    ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ಮಧ್ಯಾಹ್ನದಿಂದ ರಾತ್ರಿಯವರೆಗೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ. ಈ ನಿಯಮ ಮೀರಿ ಮಾರಾಟ ಮಾಡಿದರೇ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಸಿದ್ದಾರೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *