LATEST NEWS
ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೊರಿಕೆ – 20ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥ
ಮಂಗಳೂರು ಜನವರಿ 11: ಮಂಗಳೂರಿನ ಬೈಕಂಪಾಡಿಯ ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯ ಕೆಮಿಕಲ್ ಸೋರಿಕೆಯಾಗಿ 20 ಜನ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ ಎಂಬ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಈ ಕಾರ್ಖಾನೆಯಲ್ಲಿ ಒಟ್ಟು 80 ಜನ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಅಲ್ಪ ಪ್ರಮಾಣದಲ್ಲಿ ಅಮೋನಿಯ ಕೆಮಿಕಲ್ ಸೋರಿಕೆಯಾದ ಹಿನ್ನಲೆ 20 ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು ಘಟನೆಯಲ್ಲಿ 26 ಮಂದಿ ಅಸ್ವಸ್ಥರಾಗಿದ್ದು, ಘಟನೆ ನಡೆದ ತಕ್ಷಣ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
10ಜನ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. 16ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸದ್ಯಕ್ಕೆ ಫ್ಯಾಕ್ಟರಿಯಲ್ಲಿದ್ದ ಎಲ್ಲ ನೌಕರರನ್ನು ಹೊರಗೆ ಕಳುಹಿಸಲಾಗಿದೆ. ಸೂಕ್ತ ತನಿಖೆ ನಡೆಸಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
You must be logged in to post a comment Login