ಸುಳ್ಯ , ಏಪ್ರಿಲ್ 29: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಮಾಧವ ಗೌಡ (50) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮನೆಯಲ್ಲಿ ಇದ್ದ ವೇಳೆ ಅವಘಡ ಸಂಭವಿಸಿದೆ. ತಕ್ಷಣವೇ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿಗೆ ತಲುಪುವಾಗ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಅವರು ಕುಟುಂಬದೊಂದಿಗೆ ಕಾಣಿಯೂರಿನಲ್ಲಿ ವಾಸವಾಗಿದ್ದರು.