Connect with us

LATEST NEWS

ಪೇಟಾ ಗೆ ದೇಶದ 10 ಕೋಟಿ ಮಂದಿಗೆ ಉದ್ಯೋಗ ನೀಡಲು ಸಾಧ್ಯವೇ….?

ನವದೆಹಲಿ ಮೇ 30: ಭಾರತದ ಸಾಂಪ್ರದಾಯಿಕ ಕ್ರೀಡೆಗಳ ವಿರುದ್ದ ಸಮರ ಸಾರಿ ಸೋತು ಸುಣ್ಣವಾಗಿದ್ದ ಪ್ರಾಣಿ ದಯಾ ಸಂಘ(ಪೇಟಾ) ಇದೀಗ ದೇಶದ ಬೃಹತ್ ಹಾಲು ಉತ್ಪಾದಕ ಸಂಸ್ಥೆ ಅಮುಲ್ ಗೆ ಸಲಹೆ ನೀಡಲು ಹೋಗಿ ಜನರಿಂದ ಉಗಿಸಿಕೊಂಡಿದೆ.


ದೇಶದ ಹಾಲು ಉತ್ಪಾದನೆಯ ಬೃಹತ್ ಸಹಕಾರಿ ಸಂಸ್ಥೆಯಾದ ಅಮುಲ್‍ಗೆ ಪೇಟಾ ಪತ್ರ ಒಂದು ಬರೆದು ದನದಿಂದ ಹಾಲನ್ನು ಕರೆಯುವ ಬದಲು ಸಸ್ಯಗಳ ಉತ್ಪನ್ನಗಳಿಂದ ಕಾರ್ಖಾನೆಗಳ ಹಾಲನ್ನು ತಯಾರಿ ಅದನ್ನು ಬಳಸಲು ಸಲಹೆಯೊಂದನ್ನು ನೀಡಿದೆ. ಈ ಸಲಹೆಯನ್ನು ಅಮುಲ್ ಒಪ್ಪಿಕೊಳ್ಳುತ್ತದೆ ಎಂಬ ಭರವಸೆ ನನ್ನದು ಎಂದು ಹೇಳಿದೆ.


ಈ ಸಲಹೆ ಅಮುಲ್ ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್.ಸೋಧಿ ಕೆಂಡಾಮಂಡಲವಾಗಿದ್ದಾರೆ. ಹೈನುಗಾರಿಕೆಯನ್ನು ನಂಬಿರುವ ದೇಶದ 10 ಕೋಟಿ ಮಂದಿಗೆ ಪೇಟಾ ಉದ್ಯೋಗ ನೀಡುತ್ತಾ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.
ಹೈನುಗಾರಿಕೆ ಉದ್ಯೋಗ ಮಾಡುತ್ತಿರುವ ಶೇ.75 ಮಂದಿಗೆ ಭೂಮಿಯೇ ಇಲ್ಲ. ಈ ರೈತರ ಮಕ್ಕಳ ಶಾಲಾ ಶಿಕ್ಷಣಕ್ಕೆ ಹಣ ನೀಡುತ್ತಾ? ದೇಶದ ಬಡ ಜನತೆಗೆ ಇರುವ ಹಾಲಿನ ಅಗತ್ಯವನ್ನು ಕಡಿಮೆ ಬೆಲೆಗೆ ನೀಡುತ್ತಾ? ಲ್ಯಾಬ್ ಗಳಲ್ಲಿ ರಸಾಯನಿಕ ಮತ್ತು ಸಿಂಥೆಟಿಕ್ ವಿಟಮಿನ್ ಬಳಸಿ ತಯಾರಾಗುವ ಈ ಫ್ಯಾಕ್ಟರಿ ಆಹಾರವನ್ನು ಎಷ್ಟು ಮಂದಿ ಖರೀದಿಸಲು ಸಾಧ್ಯ ಎಂದು ಸೋಧಿ ಖಾರವಾಗಿ ಪ್ರಶ್ನಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *