Connect with us

    LATEST NEWS

    ಪುಣೆ – ಕ್ರಿಕೆಟ್ ಚೆಂಡು ಖಾಸಗಿ ಅಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಸಾವು

    ಪುಣೆ ಮೇ 06: ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವ ವೇಳೆ ಕ್ರಿಕೆಟ್ ಚೆಂಡು ಬಾಲಕನ ಮರ್ಮಾಂಗ್ ಬಡಿದು ಸಾವನಪ್ಪಿದ ಘಟನೆ ಪುಣೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.


    ಬ್ಯಾಟರ್ ಬಾಲನ್ನು ನೇರವಾಗಿ ತನ್ನತ್ತ ಹೊಡೆದಾಗ ಶೌರ್ಯ ಎಂಬ ಬಾಲಕ ಬೌಲಿಂಗ್ ಮಾಡುತ್ತಿದ್ದ. ವೇಗವಾಗಿ ಬಂದ ಚೆಂಡು ಶೌರ್ಯನ ಮರ್ಮಾಂಗಕ್ಕೆ ಬಡಿದಿದ್ದರಿಂದ, ಆತ ಮೈದಾನದಲ್ಲೇ ಕುಸಿದು ಬಿದ್ದಿರುವುದು ವಿಡಿಯೊದಲ್ಲಿ ದಾಖಲಾಗಿದೆ. ನಂತರ ಬಾಲಕನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇಲ್ನೋಟಕ್ಕೆ ಬಾಲಕನ ಆಕಸ್ಮಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.


    11 ವರ್ಷದ ಶೌರ್ಯ ಕ್ರಿಕೆಟ್‌ನಲ್ಲಿ ಕಠಿಣ ಅಭ್ಯಾಸ ಮಾಡಿ ಒಳ್ಳೆ ಕ್ರಿಕೆಟರ್ ಆಗುವ ಕನಸು ಕಂಡಿದ್ದ. ಆದರೆ ಆಕಸ್ಮಿಕವಾಗಿ ಸಂಭವಿಸಿದ ಘಟನೆಯಿಂದ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.

    Share Information
    Advertisement
    Click to comment

    You must be logged in to post a comment Login

    Leave a Reply