Connect with us

LATEST NEWS

2 ವರ್ಷದ ತಮ್ಮನ ಶವ ಮಡಿಲಲ್ಲಿ ಹಿಡಿದು ಬೀದಿ ಬದಿಯಲ್ಲಿ ಕುಳಿತ ಬಾಲಕ….!!

ಭೋಪಾಲ್: ಸರಕಾರಿ ಆಂಬ್ಯುಲೆನ್ಸ್ ಸಿಗದ ಕಾರಣ ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ಕಿರಿಯ ಸಹೋದರನ ಶವವನ್ನು ಮಡಿಲ ಮೇಲೆ ಮಲಗಿಸಿಕೊಂಡು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದ ಮನಕಲಕುವ ದೃಶ್ಯ ಮಧ್ಯಪ್ರದೇಶದ ಮೊರೆನಾದಲ್ಲಿ ಕಂಡು ಬಂದಿದೆ.

ಪೂಜಾರಾಮ್ ಜಾತವ್ ಅವರ ಎರಡು ವರ್ಷದ ಮಗು ರಾಜನ ಆರೋಗ್ಯ ಹದಗೆಟ್ಟಿತು. ಆರಂಭದಲ್ಲಿ ಮನೆಯಲ್ಲಿಯೇ ಮಗನನ್ನು ಗುಣಪಡಿಸಲು ಪೂಜಾರಾಮ್ ಜಾತವ್ ಪ್ರಯತ್ನಿಸಿದರು. ಆದರೆ ಮಗುವಿಗೆ ಹೊಟ್ಟೆ ನೋವು ತೀವ್ರವಾಗಿದ್ದರಿಂದ, ಮೊರೆನಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೇ ವೇಳೆ ಪೂಜಾರಾಮ್ ಜಾತವ್ ಅವರು ಹಿರಿಯ ಮಗ ಗುಲ್ಶನ್ ಕೂಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಂತರ ಮಗುವಿನ ಶವವನ್ನು ಗ್ರಾಮಕ್ಕೆ ಕೊಂಡೊಯ್ಯಲು ಪೂಜಾರಾಮ್ ಅವರು ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಅಂಬುಲೆನ್ಸ್ ನೀಡಲು ಆಸ್ಪತ್ರೆ ಅಧಿಕಾರಿಗಳು ತಿರಸ್ಕರಿಸದ್ದಾರೆ.

ನಂತರ ಆಸ್ಪತ್ರೆಯಿಂದ ಹೊರಗೆ ಮಗುವಿನ ಶವ ಎತ್ತುಕೊಂಡು ಬಂದ ಪೂಜಾರಾಮ್ ಜಾತವ್ ಅವರು, ವಾಹನಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಹೊರಗಿನವರು ಕೇಳಿದಷ್ಟು ಹಣ ನೀಡಲು ಪೂಜಾರಾಮ್ ಜಾತವ್ ಅವರಿಗೆ ಸಾಧ್ಯವಾಗಲಿಲ್ಲ ಮತ್ತು ಅವರಿಗೆ ಯಾವುದೇ ವಾಹನಗಳು ಕೂಡ ಸಿಗಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೇ, ಪೂಜಾರಾಮ್ ಜಾತವ್ ಅವರು ತಮ್ಮ ಹಿರಿಯ ಮಗ ಗುಲ್ಶನ್ ಅವರನ್ನು ಆಸ್ಪತ್ರೆಯ ಹೊರಗೆ ಶವದೊಂದಿಗೆ ಬಿಟ್ಟು ಮನೆಗೆ ಹೊರಡಲು ನಿರ್ಧರಿಸಿ ಹೋದರು.
ಗುಲ್ಶನ್ ತನ್ನ ಸತ್ತ ತಮ್ಮನ ತಲೆಯನ್ನು ತನ್ನ ಮಡಿಲಿನಲ್ಲಿ ಇಟ್ಟುಕೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ತಂದೆ ಹಿಂದಿರುಗುವವರೆಗೂ ಕಾಯುತ್ತಾ ಬೀದಿ ಬದಿಯಲ್ಲಿ ಕುಳಿತುಕೊಂಡಿದ್ದನು. ಈ ವೇಳೆ ಬಾಲಕನನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸ್ ಅಧಿಕಾರಿಗಳು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿ ಚಾಲಕನನ್ನು ಪೂಜಾರಾಮ್ ಜಾತವ್ ಅವರ ಮನೆಗೆ ತೆರಳುವಂತೆ ಸೂಚಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *