LATEST NEWS
ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ಇಬ್ಬರ ಸಾವು

ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತ ಇಬ್ಬರ ಸಾವು
ಮಂಗಳೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟವರನ್ನು ನೆಲ್ಯಾಡಿಯ ಕಾಂಚನ ನಿವಾಸಿಗಳಾದ ಸಹಾಯಕ ಪ್ರೊಫೆಸರ್ ಡಾ.ಜೈನಿ ಶಾಜಿ (30) ಹಾಗೂ ಜಿತಿನ್ (40) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಬೆಳ್ತಂಗಡಿ ಉಜಿರೆಯ ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್‌ನಲ್ಲಿ ಸಹಾಯಕ ಪ್ರೊಫೆಸರ್ ಆಗಿರುವ ಡಾ. ಜೈನಿ ಶಾಜಿ ಇಂದು ಬೆಳಗ್ಗೆ ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದಾಗ ವಿರುದ್ದ ಡಿಕ್ಕಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೋಲೀಸರು ಹಾಗೂ ಪುತ್ತೂರು ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.