KARNATAKA
ಬೆಂಗಳೂರು – ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ – ಐವರಿಗೆ ಗಂಭೀರ ಗಾಯ

ಬೆಂಗಳೂರು ಮಾರ್ಚ್ 01: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಪೋಟದ ಕಾರಣ ತಿಳಿದು ಬಂದಿಲ್ಲ. ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್‌ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಇನ್ನು ಈ ಸ್ಪೋಟದಲ್ಲಿ 5ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಈ ಪೈಕಿ ಮಹಿಳೆಗೆ ಗಾಯವಾಗಿದೆ.