DAKSHINA KANNADA
ಸುಳ್ಯ: ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಚಿವ ಎಸ್. ಅಂಗಾರ

ಸುಳ್ಯ, ಏಪ್ರಿಲ್ 12 : ಸುಳ್ಯ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಬೆನ್ನಲ್ಲೆ ಸಚಿವ ಎಸ್ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಮಾಧ್ಯಮಗಳೊಂದಿಗ ಮಾತನಾಡಿದ ಅವರು ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ರೀತಿ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ಲಾಭಿ ಮಾಡುವುದು ನನ್ನ ಗುಣವಲ್ಲ, ಈಗ ನನಗೆ ಅದೇ ಹಿನ್ನಡೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
