LATEST NEWS
2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವಿಧ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ವಿಚಾರಣೆ ನಡೆಸುವಂತೆ ತಾಯಿಯಿಂದ ಎಸ್ಪಿ ಗೆ ದೂರು

ಮಂಗಳೂರು, ಜುಲೈ15: 2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.
ಅನನ್ಯ ಭಟ್ ತಾಯಿ ಸುಜಾತ ಭಟ್ ಅವರು ತಮ್ಮ ವಕೀಲರೊಂದಿಗೆ ಎಸ್ಪಿ ಅವರನ್ನು ಭೇಟಿಯಾಗಿ, ಮಗಳ ನಾಪತ್ತೆ ಪ್ರಕರಣದ ಬಗ್ಗೆ ದೂರು ನೀಡಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು. ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದವರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಈ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಸದ್ರಿ ಯುವತಿಯ ತಾಯಿ ಈ ದಿನ ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ. ಸದ್ರಿ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.