Connect with us

    LATEST NEWS

    ವಿಶಾಖಪಟ್ಟಣಂ – ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆ

    ವಿಶಾಖಪಟ್ಟಣಂ ಅಕ್ಟೋಬರ್ 30: ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ನಡೆದ ಭೀಕರ ರೈಲ್ವೆ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇದಲ್ಲದೆ ಅಪಘಾತ ಸಂಭವಿಸಿದ ವೇಳೆ ಬೋಗಿಗಳು ಹಳಿತಪ್ಪಿದ ಪರಿಣಾಮ 50 ಜನರು ಗಾಯಗೊಂಡಿದ್ದಾರೆ.


    ವಿಶಾಖಪಟ್ಟಣದಿಂದ ಪಲಾಸಕ್ಕೆ ಹೋಗುತ್ತಿದ್ದ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಕೊತ್ಸವತ್ಸಲ ಬಳಿಯ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದು, ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ.
    ಮಾನವ ದೋಷದಿಂದ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿದೆ.


    ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲು ಸಂಖ್ಯೆ 08532 ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿನ ಮುಂಭಾಗದಿಂದ 11 ಕೋಚ್‌ಗಳು ವಿಜಯನಗರದ ಮುಂದಿನ ನಿಲ್ದಾಣವಾದ ಅಲಮಂಡಲಕ್ಕೆ ಕೊಂಡೊಯ್ಯಲಾಗಿದೆ, ಸದ್ಯ ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು ಬೋಗಿಗಳನ್ನು ತೆರವುಗೊಲಿಸುವ ಕಾರ್ಯ ಬರದಿಂದ ಸಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸ್ಥಳಾಂತರಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಪ್ರಧಾನಿ ಘಟನೆಯ ಕುರಿತು ಮಾತನಾಡಿದ್ದಾರೆ, ರಾಜ್ಯ ಸರ್ಕಾರ ಮತ್ತು ರೈಲ್ವೆ ತಂಡಗಳು ನಿಕಟ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ,” ಎಂದು ವೈಷ್ಣವ್ ಟ್ವೀಟ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply