DAKSHINA KANNADA
ಎರಡೇ ದಿನದಲ್ಲಿ ಉಲ್ಟಾ ಹೊಡೆದ ಸಚಿವ ಅಂಗಾರ – ರಾಜಕೀಯ ನಿವೃತ್ತಿ ಇಲ್ಲ..ಭಾಗೀರಥಿ ಮುರುಳ್ಯ ಪರ ಪ್ರಚಾರ

ಸುಳ್ಯ ಎಪ್ರಿಲ್ 14: ಟಿಕೆಟ್ ಸಿಗದ ಕಾರಣ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೆನೆ ಎಂದು ಹೇಳಿಕೆ ನೀಡಿದ್ದ ಶಾಸಕ ಅಂಗಾರ ಇದೀಗ ತಮ್ಮ ವರಸೆ ಬದಲಾಯಿಸಿದ್ದು, ಎರಡೇ ದಿನಗಳಲ್ಲಿ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಇಂದು ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು ನಾನು ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತಿದ್ದೇನೆ. ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗಿ, ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಮತಪ್ರಚಾರಕ್ಕೂ ಹೋಗುತ್ತೇನೆ ಎಂದಿದ್ದಾರೆ.

ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದು ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮಾತ್ರವಲ್ಲ, ಬಿಜೆಪಿ ಪಕ್ಷದಲ್ಲಿದ್ದುಕೊಂಡೇ ಈಗಾಗಲೇ ಪಕ್ಷ ಘೋಷಣೆ ಮಾಡಿರುವ ಅಭ್ಯರ್ಥಿಯ ಗೆಲುವಿಗಾಗಿ ಪೂರಕ ಕೆಲಸ ಮಾಡುತ್ತೇನೆ ಎಂದರು. ಏಪ್ರಿಲ್ 11ರ ರಾತ್ರಿ ಟಿವಿ ನೋಡಿದಾಗಲೇ ನನಗೆ ಸ್ಪರ್ಧೆಗೆ ಅವಕಾಶವಿಲ್ಲ ಎಂಬ ಮಾಹಿತಿ ಸಿಕ್ಕಿತ್ತು. ಇದರಿಂದ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಯಾರಲ್ಲಿ ಏನು ಹೇಳಬೇಕೆಂದೂ ತಿಳಿಯಲಿಲ್ಲ. ಹೀಗಾಗಿ ಏಪ್ರಿಲ್ 12ರಂದು ಬೆಳಗ್ಗೆ ನಾನು ಗೊಂದಲದಿಂದ ನನ್ನ ನಿರ್ಧಾರ ಪ್ರಕಟಿಸಿದೆ ಎಂದರು.