KARNATAKA
ಅಂಕೋಲಾ ಗುಡ್ಡ ಕುಸಿತ, ಸ್ಥಳ ಪರಿಶೀಲನೆ ನಡೆಸಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ತಂಡ..!
ಅಂಕೋಲಾ : 10 ಮಂದಿಯನ್ನು ಬಲಿ ಪಡೆದ ಉತ್ತರ ಕನ್ನಡದ ಅಂಕೋಲಾ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ನವದೆಹಲಿಯಿಂದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ( GSI ) ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಿತು.
ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ( GSI ) ತಂಡ ತಜ್ಞರು ಗುಡ್ಡ ಕುಸಿತ ಸ್ಥಳದಲ್ಲಿ ಕಲ್ಲು, ಮಣ್ಣು ಪರಿಶೀಲನೆ ನಡೆಸಿದ್ದಾರೆ.ಎನ್‌ಎಚ್‌ಎಐ (NHAI) ಅಧಿಕಾರಿಗಳೊಂದಿಗೆ ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಜಿಲ್ಲೆಯಲ್ಲಿ ಇದೇ ತಂಡ ಸರ್ವೆ ನಡೆಸಿ ಭೂಕುಸಿತ ಅಪಾಯವಿರುವ ಸ್ಥಳಗಳನ್ನು ಗುರುತಿಸಿತ್ತು. ಜಿಲ್ಲೆಯ ಸುಮಾರು 436 ಕಡೆ ಭೂಕುಸಿತ ಉಂಟಾಗುವ ಎಚ್ಚರಿಕೆಯನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ನೀಡಿತ್ತು.
ಮಣ್ಣು ಸರಿಸುವಾಗ ಮತ್ತೆ ಗುಡ್ಡ ಕುಸಿತ..!
ಮಣ್ಣು ತೆರವುಗೊಳಿಸುವಾಗಲೇ ಮತ್ತೆ ಗುಡ್ಡ ಕುಸಿದಿದೆ. ಐಆರ್‌ಬಿ ಸಿಬ್ಬಂದಿ ಜೆಸಿಬಿಯಿಂದ ಮಣ್ಣು ತೆಗೆಯುತ್ತಿದ್ದಂತೆ ಮತ್ತೆ ಗುಡ್ಡ ಕುಸಿದಿದ್ದು, ಕೂಡಲೇ ಸಿಬ್ಬಂದಿ ಜೆಸಿಬಿ ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಹೆದ್ದಾರಿ ಪಕ್ಕದ ಗುಡ್ಡಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು, ಹೆದ್ದಾರಿ ಅಗಲೀಕರಣಕ್ಕೆ ಅವೈಜ್ಞಾನಿಕ ರೀತಿಯಲ್ಲಿ ಗುಡ್ಡ ಕೊರೆದಿದ್ದೇ ಕುಸಿತಕ್ಕೆ ಕಾರಣ ಎನ್ನಲಾಗಿದೆ.