LATEST NEWS
ತಮಿಳುನಾಡು – ಅಣ್ಣಾಮಲೈ ಶಪಥ – ಆರು ಬಾರಿ ಚಾಟಿ ಏಟು
ಚೆನ್ನೈ ಡಿಸೆಂಬರ್ 27: ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಕೆಂಡಕಾರಿದ್ದು, ‘ಡಿಎಂಕೆ ಸರ್ಕಾರ ತೊಲಗುವವರೆಗೂ ಚಪ್ಪಲಿ ಧರಿಸುವುದಿಲ್ಲ’ ಎಂದು ಶಪಥ ಗೈದಿದ್ದಾರೆ. ಅಲ್ಲದೆ ನಿನ್ನೆ ನೀಡಿದ ಹೇಳಿಕೆಯಂತೆ ಇಂದು ಅವರು ಸ್ವಯಂ 6 ಬಾರಿ ಚಾಟಿಯಲ್ಲಿ ಹೊಡೆದುಕೊಂಡಿದ್ದಾರೆ.
ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲೇ ಇಬ್ಬರು ಕಾಮುಕರು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಬುಧವಾರ ಕ್ರಿಸ್ ಮಸ್ ಹಬ್ಬದ ಹಿನ್ನಲೆಯಲ್ಲಿ ಮಧ್ಯರಾತ್ರಿ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿ ತನ್ನ ಸ್ನೇಹಿತನೊಂದಿಗೆ ವಿದ್ಯಾರ್ಥಿನಿ ಕ್ಯಾಂಪಸ್ ಗೆ ಮರಳುತ್ತಿದ್ದಾಗ ಅವರನ್ನು ಇಬ್ಬರು ಕಾಮುಕರು ಅಡ್ಡಗಟ್ಟಿದ್ದರು. ಈ ವೇಳೆ ಸ್ನೇಹಿತನ ಮೇಲೆ ಹಲ್ಲೆ ಮಾಡಿ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ಪ್ರಕರಣ ಇದೀಗ ತಮಿಳುನಾಡಿನಲ್ಲಿ ಕೋಲಾಹಲ ಎಬ್ಬಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಡಳಿತ ಡಿಎಂಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವರೆಗೆ ನಾನು ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಇಂದು ಪ್ರತಿಭಟನಾರ್ಥವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರು ಬಾರಿ ಚಾಟಿ ಯಲ್ಲಿ ಹೊಡೆದುಕೊಂಡಿದ್ದಾರೆ.
ಹಸಿರು ‘ಮುಂಡು’ ಧರಿಸಿ, ಶರ್ಟ್ ರಹಿತ ಅಣ್ಣಾಮಲೈ ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಉದ್ದವಾದ, ಬಿಳಿ ಚಾವಟಿಯಿಂದ ತನ್ನನ್ನು ತಾನೇ ಹೊಡೆದರು. ಬಿಜೆಪಿ ಬೆಂಬಲಿಗರು “ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?”, “ಆರೋಪಿ ಜ್ಞಾನಶೇಖರನ್ ಅವರನ್ನು ಗಲ್ಲಿಗೇರಿಸಿ” ಮತ್ತು “#ShameOnYouStalin” ಎಂಬ ಘೋಷಣೆಗಳ ಫಲಕಗಳನ್ನು ಹಿಡಿದುಕೊಂಡಿದ್ದರು.
ಸ್ವಯಂ ಚಾಟಿ ಬೀಸಿದ ಬಳಿಕ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ತಮಿಳು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಯಾರಿಗಾದರೂ ಈ ಆಚರಣೆಗಳು “ಭೂಮಿಯ ಮಾರ್ಗಗಳು” ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.
ನಮ್ಮನ್ನು ನಾವೇ ಹೊಡೆದುಕೊಳ್ಳುವುದು, ನಮ್ಮನ್ನು ನಾವೇ ಶಿಕ್ಷಿಸಿಕೊಳ್ಳುವುದು, ಅತ್ಯಂತ ಕಠಿಣವಾದ ಆಚರಣೆಗಳ ಮೂಲಕ ನಮ್ಮನ್ನು ನಾವು ಹಾಕಿಕೊಳ್ಳುವುದು ಇತ್ಯಾದಿಗಳು ಈ ಸಂಸ್ಕೃತಿಯ ಭಾಗವಾಗಿದೆ. ಇದು ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಅಥವಾ ಯಾವುದರ ವಿರುದ್ಧವೂ ಅಲ್ಲ. ಇದು ರಾಜ್ಯದಲ್ಲಿ ಆಗುತ್ತಿರುವ ನಿರಂತರ ಅನ್ಯಾಯದ ವಿರುದ್ಧ ಎಂದರು
2026 ರಲ್ಲಿ, ಡಿಎಂಕೆಯನ್ನು ಅಧಿಕಾರದಿಂದ ತೆಗೆದುಹಾಕುವುದು ಮತ್ತು ತಮಿಳುನಾಡಿನ ಕಳೆದುಹೋದ ವೈಭವವನ್ನು ಮರಳಿ ಪಡೆಯುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದರು.