ಚೆನ್ನೈ, ಫೆಬ್ರವರಿ 4 : 2026ರ ಬಿಜೆಪಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿರುವ ಮಧ್ಯೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಫೈರ್ ಬ್ರಾಂಡ್, ಕೆ.ಅಣ್ಣಾಮಲೈ ನಡೆ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದೆ.

ಫೆಬ್ರವರಿ 03 ರಂದು ಅಣ್ಣಾಮಲೈ ಅವರು ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ತಮ್ಮಗೆ ನೀಡಿರುವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರುವುದು ಬಹಳಷ್ಟು ಅಚ್ಚರಿಗೆ ಕಾರಣವಾಗಿದೆ.
ಇದನ್ನೂ ಓದಿ – ಹೆಜಮಾಡಿ ಟೋಲ್ ಬಳಿ ಕುಡಿದು ಕೇರಳ ವಿದ್ಯಾರ್ಥಿಗಳ ಪುಂಡಾಟ,ವಿಡಿಯೋ ವೈರಲ್
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕೆ.ಅಣ್ಣಾಮಲೈ ಸ್ಪಷ್ಟಣೆ ನೀಡಿದ್ದು 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ ತಂದೆಯ ಅನಾರೋಗ್ಯ. ಹೀಗಾಗಿ ತಂದೆಯ ಆರೈಕೆ, ಆರೋಗ್ಯ ಕಾಳಜಿ ಪ್ರಮುಖ ಆದ್ಯತೆಯಾಗಿರುವ ಕಾರಣ ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. ಆದ್ದರಿಂದ ನನಗೆ ನೀಡಲಾಗಿದ್ದ 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು, ಅಲ್ಲಿನ ಜವಾಬ್ದಾರಿಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ –ಮಂಗಳೂರು – ಮೆದುಳಿನ ರಕ್ತಸ್ರಾವದಿಂದ ಹೆಡ್ ಕಾನ್ಸ್ ಟೇಬಲ್ ಮಾರುತಿ ಲಮಾಣಿ ನಿಧನ
ಇತ್ತ ರಾಜಕೀಯ ಪಡಸಾಲೆಯಲ್ಲಿ ಅಣ್ಣಾಮಲೈ ರಾಜೀನಾಮೆ ಕುರಿತು ಚರ್ಚೆಗಳು ಶುರುವಾಗಿದ್ದು,ನಿಜವಾದ ಕಾರಣ ಏನಿರಬಹುದು ಎಂದು ಅವರ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.