DAKSHINA KANNADA
ಕಳೆದ ವಾರ ನಾಲ್ವರ ಬಲಿ ಪಡೆದ ಅಡ್ಕಾರು ಮಾವಿನಕಟ್ಟೆ ಬಳಿ ಭೀಕರ ಅಪಘಾತ: ಮೂರು ಸಾವು

ಕಳೆದ ವಾರ ನಾಲ್ವರ ಬಲಿ ಪಡೆದ ಅಡ್ಕಾರು ಮಾವಿನಕಟ್ಟೆ ಬಳಿ ಭೀಕರ ಅಪಘಾತ: ಮೂರು ಸಾವು
ಸುಳ್ಯ ಅಕ್ಟೋಬರ್ 11: ವಾರದ ಹಿಂದೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ಬಲಿ ಪಡೆದ ಸ್ಥಳದಲ್ಲಿ ಇಂದು ಮತ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.
ಇಂದು ಸಂಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರು ಸಮೀಪದ ಮಾವಿನಕಟ್ಟೆ ಬಳಿ ಕೇರಳ ರಾಜ್ಯ ಸಾರಿಗೆ ಬಸ್ ಹಾಗಾ ಇನ್ನೋವಾ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಕಂಪ ನಿವಾಸಿ ಅಬ್ದುಲ್ ಖಾದರ್ ರವರ ಪುತ್ರ 32 ವರ್ಷದ ಮಜೀದ್ ಮತ್ತು ಪುತ್ತೂರು ತಾಲೂಕು ಕಬಕ ನಿವಾಸಿ ಉಮ್ಮರ್ ಅವರ ಪುತ್ರ 31 ವರ್ಷದ ಮಹಮ್ಮದ್ ಸಾದಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸುನೈನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಮೃತದೇಹಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿಡಲಾಗಿದೆ. ಇನೋವಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.
ಸಾವೀಗಾಡದವ ಇಬ್ಬರಿಗೂ ಮುಂದಿನ ಭಾನುವಾರ ಮದುವೆ ಫಿಕ್ಸ್ ಆಗಿತ್ತು, ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಮಡಿಕೇರಿ ತೆರಳಿ ಬರುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಾರದ ಹಿಂದೆ ಇದೇ ಸ್ಥಳದಲ್ಲಿ ಅಫಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು, ಸುಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.