DAKSHINA KANNADA
ಫಾಝಿಲ್ ಕೊಲೆ ಪ್ರಕರಣದ ಇನ್ನೋರ್ವ ಆರೋಪಿ ಬಂಧನ

ಮಂಗಳೂರು, ಆಗಸ್ಟ್ 18: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂಬಾತನನ್ನು ಬಂಧನ ಮಾಡಲಾಗಿದ್ದು, ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಆರೋಪಿಗಳನ್ನು ಕರೆದುಕೊಂಡು ಹೋಗಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ. 28ರಂದು ರಾತ್ರಿ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ನನ್ನು ದುಷ್ಕರ್ಮಿಗಳು ತಲ್ವಾರ್ ಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು.
ಪ್ರಕರಣ ಸಂಬಂಧ ಈಗಾಗಲೇ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ 6 ಮಂದಿ ಹಾಗು ಕೃತ್ಯ ನಡೆಸಲು ಕಾರು ನೀಡಿದ್ದ ಓರ್ವ ಸೇರಿ ಹಾಗೂ ಆಶ್ರಯ ನೀಡಿದ್ದ ಇನ್ನೋರ್ವ ಸೇರಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.