LATEST NEWS
ದಕ್ಷಿಣಕನ್ನಡದಲ್ಲಿ ಮತ್ತೆ ಒಂದು ಕೊರೊನಾ ಪಾಸಿಟಿವ್
ದಕ್ಷಿಣಕನ್ನಡದಲ್ಲಿ ಮತ್ತೆ ಒಂದು ಕೊರೊನಾ ಪಾಸಿಟಿವ್
ಮಂಗಳೂರು ಎಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಪಾಸಿಟಿವ್ 9ನೇ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ 49 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದ್ದು, ಸೋಂಕಿತನ ಟ್ರಾವೆಲ್ ಹಿಸ್ಟರಿ ದಕ್ಷಿಣಕನ್ನಡ ಜಿಲ್ಲಾಡಳಿತ ಬಿಡುಗಡೆಗೊಳಿಸಿದೆ.
ಮಾರ್ಚ್ 20ರಂದು ದುಬೈನಿಂದ ಅರಬ್ ಎಮಿರೆಟ್ಸ್ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ, ಬೆಂಗಳೂರು ವಿಮಾನನಿಲ್ದಾಣದಿಂದ ಪ್ರೈವೇಟ್ ಟ್ಯಾಕ್ಸಿ ಮೂಲಕ ಪುತ್ತೂರಿಗೆ ಆಗಮಿಸಿದ್ದ, ಮಾರ್ಚ್ 28ರಂದು ಗಂಟಲು ನೋವು ಕಾಣಿಸಿಕೊಂಡ ಹಿನ್ನಲೆ ಪುತ್ತೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಗಂಟಲಿನ ದ್ರವದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು, ಇಂದು ಪರೀಕ್ಷಾ ವರದಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 9ಕ್ಕೇರಿದೆ.