LATEST NEWS
ಮತ್ತೆ ಕರಾವಳಿಗೆ ಅಪ್ಪಳಿಸಲಿದೆಯೇ ಚಂಡಮಾರುತ
ಮತ್ತೆ ಕರಾವಳಿಗೆ ಅಪ್ಪಳಿಸಲಿದೆಯೇ ಚಂಡಮಾರುತ
ಮಂಗಳೂರು ಸೆಪ್ಟೆಂಬರ್ 22: ಅರಬೀ ಸಮುದ್ರದಲ್ಲಿ ಸುಳಿಗಾಳಿ ಸೃಷ್ಠಿಯಾಗಿದ್ದು, ಇದು ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಕರಾವಳಿಗೆ ನಾಲ್ಕನೇ ಚಂಡಮಾರುತ ಭೀತಿ ಎದುರಾಗಿದೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಪರಿಣಾಮ ಸೃಷ್ಟಿಯಾಗಿರುವ ಡೇ ಚಂಡಮಾರುತ ದುರ್ಬಲಗೊಂಡ ಹಿನ್ನಲೆಯಲ್ಲಿ ಈಗ ಅರಬೀ ಸಮುದ್ರದಲ್ಲೂ ಮೇಲ್ಮೆ„ ಸುಳಿಗಾಳಿ ಸೃಷ್ಟಿಯಾಗಿದ್ದು, ಇದರ ಸಾಂಧ್ರತೆ ಜಾಸ್ತಿಯಾದರೆ ಇದು ಕೂಡ ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಕರಾವಳಿಗೆ ನಾಲ್ಕನೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.
ಹವಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಅರಬೀ ಸಮುದ್ರದಲ್ಲಿ ಮೇಲ್ಮೆ„ ಸುಳಿಗಾಳಿ ಸೃಷ್ಟಿಯಾಗಿದೆ. ಒಂದು ವೇಳೆ ಇದರ ಸಾಂದ್ರತೆ ಜಾಸ್ತಿಯಾದರೇ ಅದು ಚಂಡಮಾರುತವಾಗಿ ಮಾರ್ಪಾಡಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅರಬಿ ಸಮುದ್ರದಲ್ಲಿನ ಸುಳಿಗಾಳಿ ತೀವ್ರಗೊಂಡರೆ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ.
ಕಳೆದ ಡಿಸೆಂಬರ್‌ನಿಂದ ಇಲ್ಲಿಯವರೆಗೆ ಮೂರು ಪ್ರಬಲ ಚಂಡಮಾರುತ ಕರಾವಳಿ ಮೇಲೆ ಪರಿಣಾಮ ಬೀರಿದೆ. ಈ ಹಿನ್ನಲೆಯಲ್ಲಿ ಈಗ ಮತ್ತೆ ಚಂಡ ಮಾರುತ ಎದ್ದರೇ ಕರಾವಳಿಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.