LATEST NEWS
ಬೆಳ್ತಂಗಡಿ ಮೂಲದ ವ್ಯಕ್ತಿ ಕೊರೊನಾಗೆ ಬಲಿ

ಬೆಳ್ತಂಗಡಿ ಮೂಲದ ವ್ಯಕ್ತಿ ಕೊರೊನಾಗೆ ಬಲಿ
ಮಂಗಳೂರು ಮೇ.25: ಕೊರೊನಾಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದೆ. ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ಹೃದಯ ಕಾಯಿಲೆ ಸಂಬಂಧಿಸಿದಂತೆ ಚಿಕಿತ್ಸೆಗೆಂದು 45 ವರ್ಷದ ಈ ವ್ಯಕ್ತಿ ಆಸ್ಪತ್ರೆಗೆ ಬಂದಿದ್ದು, ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ ನಂತರ ಸಾವನ್ನಪ್ಪಿದ್ದರು. ನಂತರ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಆತನಿಗೆ ಸೋಂಕು ಇರುವ ಬಗ್ಗೆ ದೃಢವಾಗಿದೆ
ಈತ ಬೆಳ್ತಂಗಡಿ ತಾಲೂಕಿನ ವೇಣೂರಿನ ವ್ಯಕ್ತಿಯಾಗಿದ್ದು, ವೇಣೂರಿನಲ್ಲಿ ಸಿಮೆಂಟ್ ಅಂಗಡಿಯ ಗೂಡ್ಸ್ ರಿಕ್ಷಾ ಚಾಲಕನಾಗಿದ್ದ ಎನ್ನಲಾಗಿದೆ.

ಈತ ವೇಣೂರಿನ ಪೇಟೆಯ ತುಂಬೆಲ್ಲಾ ಓಡಾಡಿದ್ದ ಎನ್ನಲಾಗಿದ್ದು, ಇದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಜಿಲ್ಲಾಡಳಿತವು SARI ಕೇಸ್ ಆಂತ ಪರಿಗಣಿಸಿದೆ. ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನ ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆ ಇದರಿಂದ 7ಕ್ಕೆ ಏರಿಕೆಯಾಗಿದೆ. ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಯ ಬುಲೆಟಿನ್ ಬಂದ ನಂತರ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.